ತಿಮರೋಡಿ ಬೆಂಬಲಿಗರಿಂದ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ:  ಮೂವರ ಬಂಧನ

Spread the love

ತಿಮರೋಡಿ ಬೆಂಬಲಿಗರಿಂದ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ:  ಮೂವರ ಬಂಧನ

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿರುವ ಆರೋಪಕ್ಕೆ ಸಂಬಂಧಿಸಿ ಹೋರಾಟಗಾರ, ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬ್ರಹ್ಮಾವರ ಠಾಣೆಗೆ ಕರೆತರುತ್ತಿದ್ದ ವೇಳೆ ಅವರ ಉಡುಪಿ ಜಿಲ್ಲೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಇಲಾಖಾ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಮೂವರನ್ನು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಉಜಿರೆ ನಿವಾಸಿಗಳಾದ ಸೃಜನ್ ಎಲ್ , ಹಿತೇಶ್ ಶೆಟ್ಟಿ, ಸಹನ್ ಎಂದು ಗುರುತಿಸಲಾಗಿದೆ.

ಗುರುವಾರ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿರುವ ಆರೋಪಕ್ಕೆ ಮಹೇಶ್ ಶೆಟ್ಟಿ ತಿಮ್ಮರೋಡಿ ರವರನ್ನು ವಶಕ್ಕೆ ಪಡೆದುಕೊಂಡು ಬ್ರಹ್ಮಾವರ ಠಾಣೆಗೆ ಕರೆತರುತ್ತಿರುವಾಗ ಅವರ ಬೆಂಬಲಿಗರು ಪೊಲೀಸ್ ವಾಹನಗಳನ್ನು ಹಿಂಬಾಲಿಸಿಕೊಂಡು ಬಂದಿದ್ದು ಎಸ್ಟೇ ಬಾರಿ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಬಂದು ಕರ್ತವ್ಯಕ್ಕೆ ಅಡ್ಡಿ ಪಡಿಸಬೇಡಿ ಎಂದು ಸೂಚನೆ ನೀಡಿದರೂ ಪಾಲಿಸದೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸ್ಮಾರ್ ಬಳಿ ಕರ್ತವ್ಯಕ್ಕೆ ಅಡ್ಡಿಪಡಿಸುವಂತೆ ಬಂದು ಸದ್ರಿ ತಂಡದಲ್ಲಿದ್ದ ಉಡುಪಿ ಜಿಲ್ಲೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಇಲಾಖಾ ವಾಹನ ನಂಬರ್ KA20G0669 ವಾಹನಕ್ಕೆ ಗುದ್ದಿ ಆರೋಪಿತರನ್ನು ಪ್ರಕರಣದಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗದಂತೆ ಅಡ್ಡಿಪಡಿಸಿದ್ದು, ಈ ಕುರಿತಂತೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ ಕ್ರ 99/2025 ಕಲಂ 132, 121(1), 281, 3(5) ಬಿ ಎನ್ ಎಸ್ 2023 ಮತ್ತು ಕಲಂ 3 KPDL Act ರಂತೆ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯ ಆರೋಪಿತರಿಗೆ ನ್ಯಾಯಾಂಗ ಬಂಧನ ವಿದಿಸಿರುತ್ತದೆ. ಜೊತೆಗೆ ಆರೋಪಿತರು ಕೃತ್ಯಕ್ಕೆ ಬಳಿಸಿ KA70M3048 ಬಿಳಿ ಬಣ್ಣದ ಶಿಫ್ಟ್ ಕಾರನ್ನು ವಶಕ್ಕೆ ಪಡೆಯಲಾಗಿದೆ.


Spread the love
Subscribe
Notify of

0 Comments
Inline Feedbacks
View all comments