Spread the love
ತಿಮರೋಡಿ ವಿರುದ್ಧ ಮತ್ತೆ ಗಡಿಪಾರು ಆದೇಶ ಹೊರಡಿಸಿದ ಪುತ್ತೂರು ಎ.ಸಿ
ಮಂಗಳೂರು: ಉಜಿರೆಯ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಪುತ್ತೂರು ಎಸಿ ಸ್ಟೆಲ್ಲಾ ವರ್ಗಿಸ್ ಅವರು ಮತ್ತೆ ಮೂರನೇ ಬಾರಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ.
ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಹೈಕೋರ್ಟ್ ಆದೇಶದಂತೆ ಮಾ.16 ರಿಂದ ಸೆ.16 ರವರೆಗೆ ಪುತ್ತೂರು ಎಸಿ ಸ್ಟೆಲ್ಲಾ ವರ್ಗಿಸ್ ಅವರು, ಆರು ತಿಂಗಳು ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.
ಪುತ್ತೂರು ಎ.ಸಿ ಗಡಿಪಾರು ಆದೇಶದಂತೆ ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಅವರು ನೇತೃತ್ವದಲ್ಲಿ ಪೊಲೀಸರು ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಮಾ.16 ರಂದು ಮದ್ಯರಾತ್ರಿ ಹೋಗಿ ಗಡಿಪಾರು ಆದೇಶ ಪ್ರತಿಯನ್ನು ಜಾರಿ ಮಾಡಲು ಹೋದಾಗ ಮಹೇಶ್ ಶೆಟ್ಟಿ ತಿಮರೋಡಿ ಅವರು ಮನೆಯಲ್ಲಿರದೆ ನಾಪತ್ತೆಯಾಗಿದ್ದರು ಬಳಿಕ ಮನೆಯ ಗೋಡೆಗೆ ನೋಟಿಸ್ ಅಂಟಿಸಿದ್ದಾರೆ.
Spread the love













