ದಕ ಜಿಲ್ಲೆಯಲ್ಲಿ ಮುಂದಿನ 48 ಗಂಟೆಗಳಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತ

Spread the love

ದಕ ಜಿಲ್ಲೆಯಲ್ಲಿ ಮುಂದಿನ 48 ಗಂಟೆಗಳಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತ

ಮಂಗಳೂರು: ಮಂಗಳೂರಿನಲ್ಲಿ ಗುರುವಾರ ನಡೆದ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ಮಂಗಳೂರು ನಗರದಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಿಸೆಂಬರ್ 19 ರ ರಾತ್ರಿ 10 ಗಂಟೆಯಿಂದ ಮುಂದಿನ 48 ಗಂಟೆಗಳ ವರೆಗೆ ಇಂಟರ್ ನೆಟ್ ಸ್ಥಗಿತಗೊಳಿಸಿ ರಾಜ್ಯ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೊಯೆಲ್ ಆದೇಶ ನೀಡಿದ್ದಾರೆ.

ನಗರ ಕಮಿಷನರ್ ಡಾ ಹರ್ಷ ಅವರು ಘಟನೆಯ ಕುರಿತು ರಾಜ್ಯ ಸರಕಾರಕ್ಕೆ ಮಾಹಿತಿ ನೀಡಿದ್ದು, ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿಯಲ್ಲಿದ್ದು ಇದರ ನಡುವೆಯೂ ಸಹ ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹರಡಿ ಗಲಭೆಗೆ ಕಾರಣವಾಗುತ್ತಿದ್ದು ಇದರಿಂದ ಪರಿಸ್ಥಿತಿ ಹದಗೆಡುವ ಸಂಭವವಿದ್ದು,  ಸೂಕ್ತ ಕ್ರಮ ಕೈಗೊಳ್ಳುವಂತೆ ವಿನಂತಿಸಿದ್ದರು.

ಘರ್ಷಣೆಗಳನ್ನು ಹತೋಟಿಗೆ ತರಲು ಮಂಗಳೂರು ಕಮೀಷನರೆಟ್ ವ್ಯಾಪ್ತಿ ಹಾಗೂ ದಕ ಜಿಲ್ಲೆಯಲ್ಲಿ ಮುಂದಿನ 48 ಗಂಟೆಗಳ ಅವಧಿಯಲ್ಲಿ ಅಂತರ್ಜಾಲ ವ್ಯವಸ್ಥೆಯನ್ನು ಸ್ಥಗಿತಗೊಳಿಸಲು ನಗರ ಕಮಿಷನರ್ ಡಾ ಹರ್ಷ ಅವರ ವರದಿ ಹಾಗೂ ಐಜಿಪಿ ಅವರ ಮನವಿಯಂತೆ    ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ರಜನೀಶ್ ಗೋಯಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love