ದ್ವೇಷ ಭಾಷಣ ಆರೋಪ: ಶಾಸಕ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲು

Spread the love

ದ್ವೇಷ ಭಾಷಣ ಆರೋಪ: ಶಾಸಕ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಯಾಗಿದ್ದ ವೇಳೆಯಲ್ಲಿಯೇ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಸಕ ಹರೀಶ್ ಪೂಂಜ ತೆಕ್ಕಾರಿನ ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿ ಗ್ರಾಮದ ಮುಸ್ಲಿಮರ ಬಗ್ಗೆ ಮಾನಹಾನಿಕಾರ ಮತ್ತು ಕೋಮು ದ್ವೇಷ ಭಾಷಣ ಮಾಡಿದ್ದು ಸಂಬಂಧ ಎಸ್ ಎಂ.ಎಸ್.ಇಬ್ರಾಹಿಂ ಮುಸ್ಲಿಯಾರ್ ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದರು, ದೂರಿನ ಅನ್ವಯ ಬಿಎನ್ ಎಸ್ ಕಾಯ್ದೆ ಕಲಂ 196, 353(2) ಅಡಿ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶನಿವಾರ ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, “ತೆಕ್ಕಾರಿನ ಕಂಟ್ರಿ ಬ್ಯಾರಿಗಳು ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಹಾಕಿದ ಟ್ಯೂಬ್ ಲೈಟನ್ನು ಹೊಡೆದು ಹಾಕುತ್ತಾರೆ, ಡೀಸೆಲ್ ಕದಿಯುತ್ತಿದ್ದಾರೆ” “ದೇವಾಲಯದ ಬ್ರಹ್ಮಕಲಶೋತ್ಸವದ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಮುಸ್ಲಿಂ ಮಸೀದಿಗಳಿಗೆ ಏಕೆ ನೀಡಿದ್ದೀರಿ? ನಮಗೂ ಮುಸ್ಲಿಮರಿಗೂ ಯಾವುದೇ ಸಂಬಂಧವಿಲ್ಲ. ನೀವು ಮುಸ್ಲಿಮರಿಗೆ ಆಹ್ವಾನ ಪತ್ರಿಕೆ ನೀಡಿದ್ದರಿಂದಲೇ ಅವರು ಟ್ಯೂಬ್ ಲೈಟ್ ಹೊಡೆದು ಹಾಕಿದ್ದಾರೆ ಎಂದು ಹರೀಶ್ ಪೂಂಜಾ ಹೇಳಿದ್ದರು. ಮುಸ್ಲಿಮರ ವಿರುದ್ಧ ಅವಹೇಳನಕಾರಿ ಮತ್ತು ದ್ವೇಷ ಪೂರಿತವಾಗಿ ಮಾತನಾಡಿದ ಶಾಸಕರ ವಿಡಿಯೋ ಈಗ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.
.

ಬಹಳ ಸೂಕ್ಷ್ಮ ಸನ್ನಿವೇಶದಲ್ಲಿ, ಶಾಸಕ ಹರೀಶ್ ಪೂಂಜಾ ಅವರು ದ್ವೇಷ ಭಾಷಣ ಮಾಡುವ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಎಸ್.ಎಂ.ಎಸ್.ಇಬ್ರಾಹಿಂ ಮುಸ್ಲಿಯಾರ್ ಅವರು ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದು, ದೂರಿನ ಅನ್ವಯ ಪೊಲೀಸರು ವಿಡೀಯೋಗಳನ್ನು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments