ನ. 28 : ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಭೇಟಿ ?

Spread the love

ನ. 28 : ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಭೇಟಿ? 

ಉಡುಪಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 28 ರಂದು(ಶುಕ್ರವಾರ) ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ .

ಮಧ್ಯಾಹ್ನ 12 ಗಂಟೆಗೆ ಶ್ರೀ ಕೃಷ್ಣಮಠಕ್ಕೆ ಆಗಮಿಸಲಿರುವ ಅವರು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿದ ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.

ಗೀತಾ ಜಯಂತಿ ಯ ಹಿನ್ನೆಲೆಯಲ್ಲಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ನಡೆಯಲಿರುವ “ಲಕ್ಷ ಕಂಠ ಗೀತಾ ಪಾರಾಯಣ- ಬೃಹತ್ ಗೀತೋತ್ಸವ” ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ.

ಕಾರ್ಯಕ್ರಮಕ್ಕೆ ಆಗಮಿಸುವ ಬಗ್ಗೆ ಪ್ರಧಾನಿ ಕಚೇರಿ ದೃಢಪಡಿಸಿದ್ದು ಈಗಾಗಲೇ ಅಗತ್ಯ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ಮಠದ ಮೂಲಗಳು ತಿಳಿಸಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ಇಲಾಖೆ ಈ ವರೆಗೆ ನಮಗೆ ಅಧಿಕೃತವಾದ ಮಾಹಿತಿ ಬಂದಿಲ್ಲ, ಮಠಕ್ಕೆ ಮಾಹಿತಿ ಬಂದಿರಬಹುದು ಅಂತಹ ಅಧಿಕೃತ ಮಾಹಿತಿ ಬಂದಾಗ ತಿಳಿಸಲಾಗುವುದು ಎಂದು ಹೇಳಿದೆ.


Spread the love
Subscribe
Notify of

0 Comments
Inline Feedbacks
View all comments