ನರೇಂದ್ರ ಮೋದಿ ಸಂಕಲ್ಪದ ವಿಕಸಿತ ಭಾರತ ನಿರ್ಮಾಣಕ್ಕೆ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡೋಣ : ಯಶ್ಪಾಲ್ ಸುವರ್ಣ

Spread the love

ನರೇಂದ್ರ ಮೋದಿ ಸಂಕಲ್ಪದ ವಿಕಸಿತ ಭಾರತ ನಿರ್ಮಾಣಕ್ಕೆ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡೋಣ : ಯಶ್ಪಾಲ್ ಸುವರ್ಣ

ಉಡುಪಿ: ವಿಶ್ವದಲ್ಲಿಯೇ ಗರಿಷ್ಠ ಸಂಖ್ಯೆಯ ವಿದ್ಯಾರ್ಥಿಗಳನ್ನು ಹೊಂದಿರುವ ರಾಷ್ಟ್ರ ನಮ್ಮ ಭಾರತ, ದೇಶದ ಭವಿಷ್ಯ ರೂಪಿಸುವ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಮೂಲಕ ನರೇಂದ್ರ ಮೋದಿಯವರ ಸಂಕಲ್ಪದ ವಿಕಸಿತ ಭಾರತ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು. ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಶೈಕ್ಷಣಿಕ ಸಾಧನೆಯನ್ನು ಮುಂದುವರೆಸಲು ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.

ಮಕ್ಕಳ ದಿನಾಚರಣೆ ಅಂಗವಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಸರಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ರೂ. 15 ಲಕ್ಷ ವೆಚ್ಚದಲ್ಲಿ ಸುಮಾರು 20 ಸಾವಿರ ಪೆನ್ ವಿತರಣೆ ಕಾರ್ಯಕ್ರಮಕ್ಕೆ ಮಣಿಪಾಲ ಸರಳಬೆಟ್ಟುವಿನ ಕೃಷ್ಣಪ್ಪ ಸಾಮಂತ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೆನ್ ವಿತರಣೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಓರ್ವ ಶಾಸಕನಾಗಿ ಶಿಕ್ಷಣ ಹಾಗೂ ಆರೋಗ್ಯಕ್ಕೆ ಪ್ರಥಮ ಆದ್ಯತೆ ನೀಡುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯಪ್ರವೃತ್ತರಾಗಿದ್ದು ಕ್ಷೇತ್ರದ ಜನತೆಯ ಸಹಕಾರದಿಂದ ಉಡುಪಿ ಕ್ಷೇತ್ರವನ್ನು ಮಾದರಿಯಾಗಿ ರೂಪಿಸಲು ಬದ್ಧ ಎಂದರು.

ವಿವಿಧ ಶಾಲೆ ಹಾಗೂ ಕಾಲೇಜುಗಳಿಗೆ ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು, ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ತೆರಳಿ ವಿದ್ಯಾರ್ಥಿಗಳಿಗೆ ಪೆನ್ ವಿತರಣೆ ಮಾಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ   ದಿನೇಶ್ ಅಮೀನ್, ನಗರಸಭಾ ಸದಸ್ಯರಾದ ಶ್ರೀಮತಿ ವಿಜಯಲಕ್ಷ್ಮೀ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಗ್ರೇಸಿ ರೆಬೆಲ್ಲೋ, ಮಣಿಪಾಲ ರಿಕ್ಷಾ ಚಾಲಕರ ಮಾಲಕರ ಸಂಘದ ಅಧ್ಯಕ್ಷರಾದ ಗಣೇಶ್ ಪ್ರಭು, ಉಪಾಧ್ಯಕ್ಷರಾದ ಗುರುದತ್ತ ಮಲ್ಯ, ಉದಯವಾಣಿಯ ನಿವೃತ್ತ ಸಂಪಾದಕರಾದ ನಿತ್ಯಾನಂದ ಪಡ್ರೆ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ನಟರಾಜ್ ಕಾಮತ್ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಬಸವರಾಜ್ ಜಂಬಗಿ, ಸ್ಥಳೀಯ ಪ್ರಮುಖರಾದ ಗುರುರಾಜ್ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.


Spread the love
Subscribe
Notify of

0 Comments
Inline Feedbacks
View all comments