ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್ ಗೋಡೆಯಲ್ಲಿ ಪ್ರಚೋದನಕಾರಿ ಬರಹ : ಪ್ರಕರಣ ದಾಖಲು

Spread the love

ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್ ಗೋಡೆಯಲ್ಲಿ ಪ್ರಚೋದನಕಾರಿ ಬರಹ : ಪ್ರಕರಣ ದಾಖಲು

ಕಾರ್ಕಳ: ತಾಲೂಕಿನ ಪ್ರತಿಷ್ಠಿತ ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ತಿನಿಯರ ಹಾಸ್ಟೆಲ್ ಶೌಚಾಲಯದ ಗೋಡೆಯಲ್ಲಿ ಪ್ರಚೋದನಾಕಾರಿ ಬರಹಗಳನ್ನು ಬರೆದಿರುವ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಕುರಿತು ವೀಡಿಯೊ ಸಂದೇಶದ ಮೂಲಕ ಮಾಹಿತಿ ನೀಡಿರುವ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಅವರು ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನ ಮಹಿಳಾ ವಸತಿ ನಿಲಯದ ಶೌಚಾಲಯದ ಒಳಗಡೆ ಒಂದು ಪೆನ್ನನ್ನು ಇಟ್ಟು ಪ್ರಚೋದನಾಕಾರಿ ಹೇಳಿಕೆಗಳನ್ನು ಬರೆದಿರುತ್ತಾರೆ. ಅದು ಹಿಂದೂ ಮತ್ತು ಮುಸ್ಲಿಂ ಧರ್ಮಕ್ಕೆ ಧಕ್ಕೆ ತರುವ ರೀತಿಯಲ್ಲಿ ಬರೆದಿರಲಾಗಿರುತ್ತದೆ. ಈ ಬಗ್ಗೆ ಹಾಸ್ಟೆಲಿನ ಮ್ಯಾನೇಜರ್ ಅವರು ಪೊಲೀಸರಿಗೆ ಶುಕ್ರವಾರ ಬೆಳಿಗ್ಗೆ ಮಾಹಿತಿ ನೀಡಿದ್ದು, ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನು ಯಾರೋ ಅಪರಿಚಿತ ವಿದ್ಯಾರ್ಥಿಗಳು ಬರೆದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದ್ದು, ಇದರ ಬಗ್ಗೆ ಕೂಲಕುಂಶವಾಗಿ ತನಿಖೆ ನಡೆಸಿ ಯಾರು ಇದನ್ನು ಮಾಡಿದ್ದಾರೋ ಅವರ ವಿರುದ್ದ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments