Spread the love
ನಿರಂತರ ಮಳೆ; ಮಂಗಳೂರು, ಬಂಟ್ವಾಳ, ಉಳ್ಳಾಲ ತಾಲೂಕಿನಾದ್ಯಂತ ಇಂದು(ಜು.19) ಶಾಲೆ – ಪಿಯು ಕಾಲೇಜುಗಳಿಗೆ ರಜೆ
ಮಂಗಳೂರು: ನಿರಂತರವಾಗಿ ಮಳೆಯಾಗುತ್ತಿರುವುದರಿಂದ, ಇಂದು ಶನಿವಾರ ಜು.19ರಂದು ಮಂಗಳೂರು, ಬಂಟ್ವಾಳ, ಉಳ್ಳಾಲ ತಾಲೂಕಿನಾದ್ಯಂತ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಂಗಳೂರು, ಬಂಟ್ವಾಳ ತಾಲೂಕುಗಳ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Spread the love