ಪಂಚರಾಜ್ಯ ಚುನಾವಣೆಯಲ್ಲಿ ಹಿಂದೂ ವಿರೋಧಿಗಳಿಗೆ ತಕ್ಕ ಪಾಠ: ಸತೀಶ್ ಕುಂಪಲ

Spread the love

ಪಂಚರಾಜ್ಯ ಚುನಾವಣೆಯಲ್ಲಿ ಹಿಂದೂ ವಿರೋಧಿಗಳಿಗೆ ತಕ್ಕ ಪಾಠ: ಸತೀಶ್ ಕುಂಪಲ

ಮಂಗಳೂರು: ಪಂಚರಾಜ್ಯಗಳ ಚುನಾವಣಾ ಫಲಿತಾಂಶಗಳು ದೇಶದ ರಾಜಕೀಯ ದಿಕ್ಕನ್ನು ಸ್ಪಷ್ಟವಾಗಿ ತೋರಿಸಿವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ತಮಿಳುನಾಡು, ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ರಾಜ್ಯಗಳಲ್ಲಿ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸಿದ ರಾಜಕೀಯ ಪಕ್ಷಗಳಿಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ ಎಂದು ಹೇಳಿದರು.

ಪುದುಚೇರಿಯಲ್ಲಿ ಎನ್‌ಡಿಎ ಮೈತ್ರಿ ಸರ್ಕಾರ ರಚನೆಗೆ ಮುನ್ನಡೆಯುತ್ತಿದ್ದು, ಕೇರಳದಲ್ಲಿಯೂ ಬಿಜೆಪಿ ತನ್ನ ಮತಶೇರ್ ಅನ್ನು ಗಣನೀಯವಾಗಿ ಹೆಚ್ಚಿಸಿಕೊಂಡಿದೆ. ಇದರಿಂದ ಅಲ್ಲಿನ ಕಮ್ಯುನಿಸ್ಟ್ ಸರ್ಕಾರದ ವಿರುದ್ಧ ಜನಾಭಿಪ್ರಾಯ ವ್ಯಕ್ತವಾಗಿದೆ ಎಂದು ಅಭಿಪ್ರಾಯಪಟ್ಟರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರದ ಜನಪ್ರಿಯತೆ ದೇಶಾದ್ಯಂತ ಹೆಚ್ಚುತ್ತಿರುವುದು ಈ ಫಲಿತಾಂಶಗಳಿಂದ ಸ್ಪಷ್ಟವಾಗಿದ್ದು, ಜನರ ಮನೋಭಾವ ಬಿಜೆಪಿ ಪರವಾಗಿ ರೂಪುಗೊಂಡಿದೆ ಎಂದು ತಿಳಿಸಿದ್ದಾರೆ.

ಈ ಬಾರಿ ಚುನಾವಣಾ ಫಲಿತಾಂಶಗಳು ಬಹುತೇಕ ಎಕ್ಸಿಟ್ ಪೋಲ್‌ಗಳ ಅಂದಾಜುಗಳನ್ನು ಮೀರಿರುವುದು ಗಮನಾರ್ಹವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಪಕ್ಷಕ್ಕೆ ಮತ ನೀಡಿದ ಎಲ್ಲಾ ಮತದಾರರಿಗೆ ಅವರು ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದರು.


Spread the love
Subscribe
Notify of

0 Comments
Inline Feedbacks
View all comments