ಪಡುಬಿದ್ರೆ ಮನೆ ಕಳ್ಳತನ ಪ್ರಕರಣ: ಮತ್ತೊರ್ವ ಆರೋಪಿ ಬಂಧನ

Spread the love

ಪಡುಬಿದ್ರೆ ಮನೆ ಕಳ್ಳತನ ಪ್ರಕರಣ: ಮತ್ತೊರ್ವ ಆರೋಪಿ ಬಂಧನ

ಪಡುಬಿದ್ರೆ: ಪಡುಬಿದ್ರೆ ಪಾದಬೆಟ್ಟು ಗ್ರಾಮದ ಕಾಮತ್ ಪೆಟ್ರೋಲ್ ಬಳಿ ಜೂ.22ರಂದು ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ.

ದ.ಕ. ಜಿಲ್ಲೆಯ ಪುತ್ತೂರು ತಾಲೂಕಿನ ಬನ್ನೂರು ನಿವಾಸಿ ನೌಷಾದ್ ಬಿ.ಎ.(38) ಬಂಧಿತ ಆರೋಪಿ. ಗಣೇಶ್ ಪ್ರಸಾದ್ ಶೆಟ್ಟಿ ಎಂಬವರ ಮನೆಗೆ ನುಗ್ಗಿದ ಕಳ್ಳರು, 1,45,000 ರೂ. ಮೌಲ್ಯದ ನಗ ನಗದು ಕಳವು ಮಾಡಿರುವ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ನಡೆಸಿದ ಪೊಲೀಸರು ಇಬ್ರಾಹಿಂ ಕಲಂದರ್(42) ಹಾಗೂ ರಿಯಾಜ್(32) ಎಂಬವರನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ ಕಾರು ಹಾಗೂ 24,000ರೂ. ನಗದು ವಶ ಪಡಿಸಿಕೊಂಡಿದ್ದರು. ತನಿಖೆ ಮುಂದುವರೆಸಿದ ಪೊಲೀಸರು ಆ.22ರಂದು ನೌಷದ್‌ನನ್ನು ಮಂಗಳೂರಿನಲ್ಲಿ ಬಂಧಿಸಿ, 80000ರೂ. ಮೌಲ್ಯದ ಚಿನ್ನವನ್ನು ಹಾಗೂ 32000ರೂ. ನಗದು ವಶಪಡಿಸಿಕೊಂಡಿದ್ದಾರೆ. ಒಟ್ಟಾರೆ ಈ ಪ್ರಕರಣದಲ್ಲಿ ಆರೋಪಿತರಿಂದ 8 ಗ್ರಾಂ ಚಿನ್ನ ಹಾಗೂ 56000 ನಗದನ್ನು ವಶಪಡಿಸಿಕೊಳ್ಳಲಾಗಿದೆ.

ನೌಷಾಧ್ ವಿರುದ್ಧ ಕೇರಳ ರಾಜ್ಯದ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ 1 ಸುಲಿಗೆ ಪ್ರಕರಣ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಠಾಣೆಯಲ್ಲಿ 1 ಹಲ್ಲೆ ಪ್ರಕರಣ, ಬೆಳ್ಳಾರೆ ಠಾಣೆಯಲ್ಲಿ 1 ಸುಲಿಗೆ ಪ್ರಕರಣ, ಬೆಂಗಳೂರು ಮಾದ ನಾಯಕನಹಳ್ಳಿ ಠಾಣೆಯಲ್ಲಿ 1 ಆರ್ಮ್ಸ್ ಕಾಯಿದೆ ಪ್ರಕರಣ, ಉಡುಪಿ ಜಿಲ್ಲೆಯ ಕುಂದಾಪುರ ಹಾಗೂ ಬೈಂದೂರು ಪೊಲೀಸ್ ಠಾಣೆಯಲ್ಲಿ ತಲಾ 1 ಪ್ರಕರಣ, ತುಮಕೂರು ಜಿಲ್ಲೆಯ ಚಿಕ್ಕನಾಯಕನ ಹಳ್ಳಿ ಪೊಲೀಸ್ ಠಾಣೆಯಲ್ಲಿ 1 ಕಳ್ಳತನ ಪ್ರಕರಣ ಹಾಗೂ ಬೆಂಗಳೂರು ನಗರ ತಗಲಗಟ್ಟಿಪುರ ಠಾಣೆಯಲ್ಲಿ 1 ಕಳ್ಳತನ ಪ್ರಕರಣ, ಸುಲಿಗೆ ಪ್ರಕರಣ ದಾಖಲಾಗಿದ್ದು, ಆರೋಪಿತ ಒಟ್ಟು 8 ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments