ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರಕ್ಕೆ ಕುಂದಾಪುರ ಲಯನ್ಸ್ ಕ್ಲಬ್‍ನಿಂದ ಕಸದ ಬಿನ್ ಕೊಡುಗೆ
ಮಂಗಳೂರು: ಸಾರ್ವಜನಿಕ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯ ಮಹತ್ವವನ್ನು ಅರಿತು ಕುಂದಾಪುರ ಲಯನ್ಸ್ ಕ್ಲಬ್ ವತಿಯಿಂದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರಕ್ಕೆ ಕಸದ ಬಿನ್ ಕೊಡುಗೆಯಾಗಿ ನೀಡಿದ್ದಾರೆ.
ಪಿಲಿಕುಳದಲ್ಲಿ ಸ್ವಚ್ಛತೆ ಕಾಪಾಡುವ ಉದ್ದೇಶದಿಂದ ಈ ಕಸದ ಬಿನ್ ಉಪಯೋಗಿಸಲಾಗುವುದು. ಸಾರ್ವಜನಿಕರು ಕಸವನ್ನು ಸರಿಯಾಗಿ ವಿಲೇವಾರಿ ಮಾಡುವ ಮೂಲಕ ಪರಿಸರ ಸಂರಕ್ಷಣೆಗೆ ಸಹಕಾರ ನೀಡಬೇಕು ಎಂಬ ಸಂದೇಶವನ್ನು ಈ ಕಾರ್ಯಕ್ರಮದ ಮೂಲಕ ನೀಡಲಾಗಿದೆ.
ಈ ಸಂದರ್ಭದಲ್ಲಿ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ.ಅರುಣ್ ಕುಮಾರ್ ಶೆಟ್ಟಿ ಹಾಗೂ ಕುಂದಾಪುರ ಲಯನ್ಸ್ ಕ್ಲಬ್‍ನ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಮಾಜಮುಖಿ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಕುಂದಾಪುರ ಲಯನ್ಸ್ ಕ್ಲಬ್‍ಗೆ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರವು ಕೃತಜ್ಞತೆ ಸಲ್ಲಿಸಿದೆ.













