ಪುತ್ತೂರು: ಪೊಲೀಸ್ ಇಲಾಖೆಯ ವತಿಯಿಂದ ಜೂನ್ 26ರಂದು ‘ಮಾದಕ ದ್ರವ್ಯ ಮುಕ್ತ 5K ಮ್ಯಾರಥಾನ್’

Spread the love

ಪುತ್ತೂರು: ಪೊಲೀಸ್ ಇಲಾಖೆಯ ವತಿಯಿಂದ ಜೂನ್ 26ರಂದು ‘ಮಾದಕ ದ್ರವ್ಯ ಮುಕ್ತ 5K ಮ್ಯಾರಥಾನ್’

ಪುತ್ತೂರು: ಮಾದಕ ದ್ರವ್ಯಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ಅಂತರಾಷ್ಟ್ರೀಯ ದಿನದ ಅಂಗವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಹಾಗೂ ಪುತ್ತೂರು ಉಪ ವಿಭಾಗದ ವತಿಯಿಂದ ‘ಫಿಟ್ ಇಂಡಿಯಾ – ಮಾದಕ ದ್ರವ್ಯ ಮುಕ್ತ 5K ಮ್ಯಾರಥಾನ್’ ಆಯೋಜಿಸಲಾಗಿದೆ.

ಜೂನ್ 26ರಂದು ಶುಕ್ರವಾರ ಬೆಳಿಗ್ಗೆ 6 ಗಂಟೆಗೆ ಪುತ್ತೂರಿನ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಮ್ಯಾರಥಾನ್ಗೆ ಚಾಲನೆ ದೊರೆಯಲಿದೆ.

ಮ್ಯಾರಥಾನ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಿಂದ ಆರಂಭಗೊಂಡು ದರ್ಬೆ ವೃತ್ತ, ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಮಾರ್ಗವಾಗಿ ಸಂಚರಿಸಿ ಮತ್ತೆ ದೇವಸ್ಥಾನದ ಮೈದಾನಕ್ಕೆ ತಲುಪಿ ಸಮಾಪನಗೊಳ್ಳಲಿದೆ.

ಈ ಜಾಗೃತಿ ಓಟದಲ್ಲಿ ಭಾಗವಹಿಸಲು ಮಹಿಳೆಯರು ಹಾಗೂ ಪುರುಷರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಭಾಗವಹಿಸಲು ಆಸಕ್ತರು ದಕ್ಷಿಣ ಕನ್ನಡ ಜಿಲ್ಲೆಯ ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಆನ್ಲೈನ್ ನೋಂದಣಿ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಈ ಕೆಳಗಿನ ಲಿಂಕ್ ಬಳಸಿ ನೋಂದಾಯಿಸಿಕೊಳ್ಳಬಹುದು: https://forms.gle/3UKZUXEmnTpws7qK8

ನೋಂದಣಿಗೆ ಜೂನ್ 25ರಂದು ಸಂಜೆ 6 ಗಂಟೆಯವರೆಗೆ ಅವಕಾಶವಿದ್ದು, ಬಳಿಕ ನೋಂದಣಿ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.

ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣ ಹಾಗೂ ಆರೋಗ್ಯವಂತ ಭಾರತದ ಕನಸನ್ನು ಸಾಕಾರಗೊಳಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಮ್ಯಾರಥಾನ್ನಲ್ಲಿ ಸಾರ್ವಜನಿಕರು, ಯುವಜನರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ.


Spread the love
Subscribe
Notify of

0 Comments