ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ – ₹80 ಸಾವಿರ ದಂಡ ವಿಧಿಸಿದ ಮಂಗಳೂರಿನ FTSC-2 ನ್ಯಾಯಾಲಯ

Spread the love

ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ – ₹80 ಸಾವಿರ ದಂಡ ವಿಧಿಸಿದ ಮಂಗಳೂರಿನ FTSC-2 ನ್ಯಾಯಾಲಯ

ಮಂಗಳೂರು: ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹80 ಸಾವಿರ ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ FTSC-2 ಆದೇಶ ನೀಡಿದೆ.

ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪರಾಧ ಸಂಖ್ಯೆ 141/2025ರ ಪ್ರಕರಣದಲ್ಲಿ ಪೋಕ್ಸೋ ಕಾಯ್ದೆ-2012ರ ವಿವಿಧ ಕಲಂಗಳು ಹಾಗೂ ಬಿಎನ್‌ಎಸ್‌-2023ರ ಸಂಬಂಧಿತ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಪ್ರಕರಣದ ತನಿಖಾಧಿಕಾರಿ ಹಾಗೂ ಬಂಟ್ವಾಳ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ ಅವರು ತನಿಖೆ ನಡೆಸಿ, ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿ, ಬೆಳ್ತಂಗಡಿ ಗುರುವಾಯನಕೆರೆ ನಿವಾಸಿ ಅಬ್ದುಲ್ ಲತಿಫ್ ಸೇರಿದಂತೆ ಮೂವರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ FTSC-2ರಲ್ಲಿ ನಡೆದಿದ್ದು, ಅಬ್ದುಲ್ ಲತಿಫ್ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಮಾನು ಕೆ.ಎಸ್. ಅವರು ಸೆಪ್ಟೆಂಬರ್ 19, 2026ರಂದು ತೀರ್ಪು ಪ್ರಕಟಿಸಿದರು.

ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ವಾಸದ ಶಿಕ್ಷೆ ಹಾಗೂ ₹80 ಸಾವಿರ ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ.

ಸರ್ಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ಅವರು ಪ್ರಕರಣದಲ್ಲಿ ನ್ಯಾಯಾಲಯದ ಮುಂದೆ ಸಮರ್ಥವಾಗಿ ವಾದ ಮಂಡಿಸಿದ್ದರು.


Spread the love
Subscribe
Notify of

0 Comments