ಪ್ರಚೋದನಕಾರಿ ಭಾಷಣ ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಲವಂತದ ಕ್ರಮ ಬೇಡ – ನ್ಯಾಯಾಲಯ

Spread the love

ಪ್ರಚೋದನಕಾರಿ ಭಾಷಣ ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಲವಂತದ ಕ್ರಮ ಬೇಡ – ನ್ಯಾಯಾಲಯ

ಮಂಗಳೂರು: ಪ್ರಚೋದನಕಾರಿ ಭಾಷಣ ಆರೋಪದಡಿ ದಾಖಲಾಗಿದ್ದ ಪ್ರಕರಣದಿಂದ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ಪಡೆದಿದ್ದ ಹಿಂದೂ ನಾಯಕ, ಆರ್‌ಎಸ್‌ಎಸ್ ಮುಂದಾಳು ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಬಲವಂತದ ಕ್ರಮ ಕೈಗೊಳ್ಳದಂತೆ ಪುತ್ತೂರು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಆದೇಶ ನೀಡಿದೆ. ಮುಂದಿನ ವಿಚಾರಣೆವರೆಗೆ ಬಂಧನ ಸಹಿತ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ನೀಡಿದೆ.

ಪ್ರಚೋದನಕಾರಿ ಭಾಷಣ ಆರೋಪದಡಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಎಫ್‌ಐಆರ್ ದಾಖಲಾಗಿತ್ತು. ಅಕ್ಟೋಬರ್ 20 ರಂದು ಪುತ್ತೂರು ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಭಾಷಣ ಮಾಡಿದ್ದರು. ಭಾಷಣದ ವೇಳೆ ಧಾರ್ಮಿಕ ಬಾವನೆಗಳ ಪ್ರಚೋಜನೆ, ಮಹಿಳೆಯರಿಗೆ ಅವಮಾನ ಮಾಡಿದ್ದಾರೆ ಎಂದು ಈಶ್ವರಿ ಪದ್ಮುಂಜ ಎಂಬವರು ನೀಡಿದ ದೂರಿನ ಅನ್ವಯ ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಪುತ್ತೂರು ಗ್ರಾಮಂತರ ಪೊಲೀಸರು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದರು. ಹೀಗಾಗಿ ಕಲ್ಲಡ್ಕ ಪ್ರಭಾಕರ ಭಟ್ ಪೊಲೀಸರ ಎಫ್‌ಐಆರ್ ವಿರುದ್ದ ಕೋರ್ಟ್ ಮೆಟ್ಟಿಲೇರಿದ್ದರು. ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ದ್ವೇಷಪೂರಿತ ಎಂದು ವಾದಿಸಿದ್ದರು. ಇದೀಗ ಕೋರ್ಟ್ ಪೊಲೀಸರಿಗೆ ಮಹತ್ವದ ಸೂಚನೆ ನೀಡಿದೆ. ಮುಂದಿನ ವಿಚಾರಣೆ ವರೆಗೆ ಯಾವುದೇ ಕ್ರಮ ಕೈಗೊಳ್ಳದಂತೆ ಸೂಚಿಸಿದೆ.ಮುಂದಿನ ವಿಚಾರಣೆಯನ್ನು ಅಕ್ಟೋಬರ್ 29ಕ್ಕೆ ಮುಂದೂಡಿದೆ. ಅರ್ಜಿ ವಿಚಾರಣೆ ನಡೆಸಿರುವ ಕೋರ್ಟ್, ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ


Spread the love
Subscribe
Notify of

0 Comments
Inline Feedbacks
View all comments