ಬಸ್ ಮಾಲಕ ಸೈಯಿಪುದ್ದಿನ್ ಕೊಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

Spread the love

ಬಸ್ ಮಾಲಕ ಸೈಯಿಪುದ್ದಿನ್ ಕೊಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಉಡುಪಿ : ಸೆಪ್ಟೆಂಬರ್ 27, 2025ರಂದು ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಖಾಸಗಿ ಬಸ್ ಮಾಲಕ ಸೈಯಿಪುದ್ದಿನ್ ಅವರ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಉಡುಪಿ ಮಿಷನ್ ಕಂಪೌಂಡ್ ನಿವಾಸಿ ಮಹಮದ್ ಫೈಸಲ್ ಖಾನ್ (27) ಕರಂಬಳ್ಳೀ ಕುಂಜಿಬೆಟ್ಟು ನಿವಾಸಿ ಮೊಹಮ್ಮದ್ ಶರೀಫ್ (37) ಮತ್ತು ಕಾಟಿಪಳ್ಳ ನಿವಾಸಿ ಅಬ್ದುಲ್ ಶುಕುರ್ (43) ಎಂದು ಗುರುತಿಸಲಾಗಿದೆ

ಮೂರು ಆರೋಪಿಗಳನ್ನೂ ದಸ್ತಗಿರಿ ಮಾಡಲಾಗಿದ್ದು, ಅವರನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಈ ಕಾರ್ಯಾಚರಣೆಯನ್ನು ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಡಿ.ಟಿ. ಪ್ರಭು ಅವರ ಮಾರ್ಗದರ್ಶನದಲ್ಲಿ, ಮಲ್ಪೆ ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ ರಾಮಚಂದ್ರ ನಾಯಕ್ ಅವರ ನೇತೃತ್ವದಲ್ಲಿ ವಿಶೇಷ ತಂಡ ರೂಪಿಸಿ ನಡೆಸಲಾಯಿತು.

ಕೊಲೆ ಪ್ರಕರಣದ ತನಿಖೆ ಮುಂದುವರಿದಿದ್ದು, ಇನ್ನಷ್ಟು ಮಾಹಿತಿಗಾಗಿ ಪೊಲೀಸರು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ.


Spread the love