ಬಿ.ಸಿ.ರೋಡ್ ವೃತ್ತಕ್ಕೆ ಕಾರು ಢಿಕ್ಕಿ : ಮೃತರ ಸಂಖ್ಯೆ ಮೂರಕ್ಕೆ ಏರಿಕೆ

Spread the love

ಬಿ.ಸಿ.ರೋಡ್ ವೃತ್ತಕ್ಕೆ ಕಾರು ಢಿಕ್ಕಿ : ಮೃತರ ಸಂಖ್ಯೆ ಮೂರಕ್ಕೆ ಏರಿಕೆ

ಬಂಟ್ವಾಳ : ಬಿ.ಸಿ.ರೋಡಿನ ಸರ್ಕಲ್ ನಲ್ಲಿ ನಡೆದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತರನ್ನು ಬೆಂಗಳೂರು ಪೀಣ್ಯ ನಿವಾಸಿಗಳಾದ ರವಿ (64) ರಮ್ಯ (23) ಹಾಗೂ ನಂಜಮ್ಮ ( 75) ಗುರುತಿಸಲಾಗಿದೆ. ಉಳಿದಂತೆ ಕೀರ್ತಿ, ಸುಶೀಲಾ, ಬಿಂದು ಹಾಗೂ ಪ್ರಶಾಂತ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಾಲಕ ಸುಬ್ರಹ್ಮಣ್ಯ ಹಾಗೂ ಕಿರಣ್ ಅವರು ಅಲ್ಪಸ್ವಲ್ಪ ಗಾಯಗಳೊಂದಿಗೆ ಯಾವುದೇ ಅಪಾಯವಿಲ್ಲದೆ ಪಾರಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಮೂರು ಮೃತ ದೇಹಗಳ ಪೈಕಿ ಒಂದು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಹಾಗೂ ಇಬ್ಬರ ಮೃತದೇಹಗಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ಬೆಂಗಳೂರಿನಿಂದ ಇನ್ನೋವಾ ಕಾರಿನಲ್ಲಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಕೃಷ್ಣನ ದರ್ಶನಕ್ಕೆಂದು ಹೊರಟಿದ್ದರು ಎಂದು ಹೇಳಲಾಗಿದೆ.

ಮುಂಜಾನೆ ಸುಮಾರು 4.40 ರ ಸಮಯದಲ್ಲಿ ಬೆಂಗಳೂರಿನ ಕಡೆಯಿಂದ ಬರುತ್ತಿದ್ದ ಕಾರು ಬಿಸಿರೋಡಿನ ನಾರಾಯಣ ಗುರು ಸರ್ಕಲ್ ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಉಳಿದಂತೆ ಇಬ್ಬರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅವೈಜ್ಞಾನಿಕ ಮಾದರಿಯ ಸರ್ಕಲ್ ಅಪಘಾತಕ್ಕೆ ಕಾರಣ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ .

ಘಟನಾ ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಸುತೇಶ್ ಹಾಗೂ ಬಂಟ್ವಾಳ ಸಂಚಾರಿ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love