‘ಬೂಕರ್’ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ

Spread the love

ಬೂಕರ್’ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ

ಬೆಂಗಳೂರು: ಪ್ರತಿಷ್ಟಿತ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರು ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಘೋಷಿಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಬಾನು ಮುಷ್ತಾಕ್​ ಅವರ ‘ಹೃದಯ ದೀಪ’ ಕೃತಿಗೆ ಬೂಕರ್ ಪ್ರಶಸ್ತಿ ಸಿಕ್ಕಿದೆ. ಕರ್ನಾಟಕದ ಮಹಿಳೆಗೆ ಬೂಕರ್ ಸಿಕ್ಕಿದ್ದು ಬಹಳ ಸಂತೋಷವಾಗಿದೆ. ಹೋರಾಟದ ಹಿನ್ನೆಲೆಯಿಂದ ಬಂದವರು ಬಾನು ಮುಷ್ತಾಕ್. ರೈತ ಮತ್ತು ಕನ್ನಡ ಚಳವಳಿಯಲ್ಲೂ ಕೆಲಸ ಮಾಡಿದ್ದಾರೆ. ಹೀಗಾಗಿ ಅವರನ್ನು ದಸರಾ ಮಹೋತ್ಸವದ ಉದ್ಘಾಟನೆಗೆ ಆಹ್ವಾನಿಸಿದ್ದೇವೆ ಎಂದರು.

ಈ ಬಾರಿ ಮೈಸೂರು ದಸರಾ ಸೆಪ್ಟೆಂಬರ್‌ 22ರಿಂದ ಅಕ್ಟೋಬರ್ 2ರವರೆಗೆ 11 ದಿನಗಳ ಕಾಲ ನಡೆಯಲಿದ್ದು, ಉದ್ಘಾಟನೆಗೆ ಮೈಸೂರು ಜಿಲ್ಲಾಡಳಿತವು, ಕನ್ನಡದ ಲೇಖಕಿ ಬಾನು ಮುಷ್ತಾಕ್ ಅವರನ್ನು ಗೌರವದಿಂದ ಅಧಿಕೃತವಾಗಿ ಆಹ್ವಾನಿಸಲಿದೆ ಎಂದು ಸಿಎಂ ತಿಳಿಸಿದರು.


Spread the love
Subscribe
Notify of

0 Comments
Inline Feedbacks
View all comments