ಬೆಟ್ಟಿಂಗ್ ದಂಧೆಗೆ ಕಡಿವಾಣ ಬೀಳಲಿ : ಕೆ. ವಿಕಾಸ್ ಹೆಗ್ಡೆ
ಕುಂದಾಪುರ: ಸಮಾಜದ ಸ್ವಾಸ್ತ್ಯ ಹಾಳು ಮಾಡುತ್ತಿರುವ ಬೆಟ್ಟಿಂಗ್ ದಂಧೆಗೆ ಪೊಲೀಸ್ ಇಲಾಖೆ ಕಡಿವಾಣ ಹಾಕಬೇಕು ಕುಂದಾಪುರ ತಾಲ್ಲೂಕು ರೈತ ಮುಖಂಡ ಕೆ. ವಿಕಾಸ್ ಹೆಗ್ಡೆ ಆಗ್ರಹಿಸಿದ್ದಾರೆ.
ಇವತ್ತು ಆತ್ಮಹತ್ಯೆಗೆ ಶರಣಾದ ಹೆಚ್ಚಿನ ಯುವಕರ ಆತ್ಮಹತ್ಯೆಯ ಕಾರಣದ ಹಿಂದೆ ಬೆಟ್ಟಿಂಗ್ ದಂದೆ ಎನ್ನುವ ಮಾತು ಕೇಳಿ ಬರುತ್ತಿದೆ. ಇವತ್ತು ವಿದ್ಯಾರ್ಥಿಗಳು ಹಾಗೂ ಯುವ ಜನತೆ ಹೆಚ್ಚಾಗಿ ಈ ಬೆಟ್ಟಿಂಗ್ ನಲ್ಲಿ ಸಿಕ್ಕಿಹಾಕಿಕೊಂಡು ಲಕ್ಷಗಟ್ಟಲೆ ಹಣದ ಸಾಲ ಮಾಡಿಕೊಂಡು ಹಣ ಮರುಪಾವತಿ ಸಾಧ್ಯವಾಗದೆ ಬೆಟ್ಟಿಂಗ್ ದಂದೆಯವರ ಕಿರುಕುಳಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗುತ್ತಿರುವ ಅದೆಷ್ಟೋ ಪ್ರಕರಣಗಳು ನಮ್ಮ ಸುತ್ತಮುತ್ತ ನಡೆಯುತ್ತಿದೆ. ಸಮಾಜದಲ್ಲಿ ದೊಡ್ಡ ಪಿಡುಗಾಗಿ ಹಬ್ಬಿರುವ ಈ ಬೆಟ್ಟಿಂಗ್ ದಂದೆಕೋರರನ್ನು ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕುಂದಾಪುರ ತಾಲ್ಲೂಕು ರೈತ ಮುಖಂಡ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ಆಗ್ರಹಿಸಿದ್ದಾರೆ.