ಭಾರೀ ಮಳೆ: ಉಡುಪಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಮೇ 27(ಮಂಗಳವಾರ)ರಜೆ ಘೋಷಣೆ

Spread the love

ಭಾರೀ ಮಳೆ: ಉಡುಪಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಮೇ 27(ಮಂಗಳವಾರ)ರಜೆ ಘೋಷಣೆ

ಉಡುಪಿ: ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ಪರಿಸ್ಥಿತಿಯು ಮುಂದುವರಿಯುವ ಸೂಚನೆಯ್ದಿದ್ದು ದಿನಾಂಕ: 28.05.2025 ರವರೆಗೆ ಜಿಲ್ಲೆಯಾದ್ಯಂತ ರೆಡ್ – ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.

> ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ದಿನಾಂಕ: 27.05.2025 ರಂದು ರಜೆಯನ್ನು ಘೋಷಿಸಲಾಗಿರುತ್ತದೆ.

> ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.

> ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ

> ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ ಸಮುದ್ರತೀರಕ್ಕೆ, ಚಾರಣಕ್ಕೆ ತೆರಳದಂತೆ ಸೂಚಿಸಲಾಗಿದೆ.

> ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವುದು.

ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವುದು.

ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ 24*7 1077 /

0820-2574802-DC office

0820-2520417-udupi taluk

08258-230201-karkala taluk

08254-230357-kundapura

0820-2560494-Brahmavara

08254-251657-Byndoor

0820-2551444-Kaup

08253-250201-Hebri


Spread the love
Subscribe
Notify of

0 Comments
Inline Feedbacks
View all comments