ಮಂಗಳೂರಿನ ಕರಂಗಲಪಾಡಿಯಲ್ಲಿ ಸರಣಿ ಅಪಘಾತ: ಇಬ್ಬರಿಗೆ ಗಾಯ

Spread the love

ಮಂಗಳೂರಿನ ಕರಂಗಲಪಾಡಿಯಲ್ಲಿ ಸರಣಿ ಅಪಘಾತ: ಇಬ್ಬರಿಗೆ ಗಾಯ

ಮಂಗಳೂರು: ನಗರದ ಕರಂಗಲಪಾಡಿಯ ಕೋರ್ಟ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, ಗೂಡ್ಸ್ ಆಟೋ ಹಾಗೂ ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಕೋರ್ಟ್ ರಸ್ತೆಯ ಇಳಿಜಾರಿನಲ್ಲಿ ಚಲಿಸುತ್ತಿದ್ದ ಗೂಡ್ಸ್ ಆಟೋ ಹಾಗೂ ಕರಂಗಲಪಾಡಿ ಕಡೆಯಿಂದ ಕೋರ್ಟ್ ರಸ್ತೆಗೆ ಪ್ರವೇಶಿಸುತ್ತಿದ್ದ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಢಿಕ್ಕಿಯ ರಭಸಕ್ಕೆ ರಸ್ತೆಯಲ್ಲಿ ಚಲಿಸುತ್ತಿದ್ದ ದ್ವಿಚಕ್ರ ವಾಹನವೂ ಅಪಘಾತಕ್ಕೆ ಸಿಲುಕಿಕೊಂಡಿದೆ.

ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ಹಾಗೂ ಗೂಡ್ಸ್ ಆಟೋ ಚಾಲಕ ಗಾಯಗೊಂಡಿದ್ದು, ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ತೀವ್ರತೆಗೆ ಕಾರು, ಗೂಡ್ಸ್ ಆಟೋ ಹಾಗೂ ದ್ವಿಚಕ್ರ ವಾಹನಗಳು ಜಖಂಗೊಂಡಿವೆ. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸಂಚಾರ ವಿಭಾಗದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love
Subscribe
Notify of

0 Comments