ಮಂಗಳೂರಿನಲ್ಲಿ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ರೋಹನ್ ಕಾರ್ಪೊರೇಶನ್ ವತಿಯಿಂದ ಸನ್ಮಾನ

Spread the love

ಮಂಗಳೂರಿನಲ್ಲಿ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ರೋಹನ್ ಕಾರ್ಪೊರೇಶನ್ ವತಿಯಿಂದ ಸನ್ಮಾನ

ಮಂಗಳೂರು: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ಗೌರವಿಸುವ ಸಲುವಾಗಿ ರೋಹನ್ ಕಾರ್ಪೊರೇಶನ್ ವತಿಯಿಂದ ಶನಿವಾರ ನಗರದ ಬಿಜೈನಲ್ಲಿರುವ ರೋಹನ್ ಸಿಟಿಯಲ್ಲಿ ವಿಶೇಷ ಸನ್ಮಾನ ಸಮಾರಂಭವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಪ್ರಶಸ್ತಿ ವಿಜೇತರು, ಮಾಧ್ಯಮ ಪ್ರತಿನಿಧಿಗಳು, ಆಹ್ವಾನಿತ ಅತಿಥಿಗಳು ಹಾಗೂ ಸಂಸ್ಥೆಯ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ರೋಹನ್ ಕಾರ್ಪೊರೇಶನ್ ನ ನಿರ್ದೇಶಕರಾದ ಶ್ರೀ ಡಿಯೋನ್ ಮೊಂತೇರೊ ಹಾಗೂ ಜನರಲ್ ಮ್ಯಾನೇಜರ್ ಶ್ರೀಮತಿ ಸುಮನಾ ಅವರು ಪ್ರಶಸ್ತಿ ವಿಜೇತರನ್ನು ಅಭಿನಂದಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ‘ಮಿಥ್ಯ’ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಪಡೆದ ರೂಪಶ್ರೀ ವರ್ಕಾಡಿ, ‘ಮಿಥ್ಯ’ ಚಿತ್ರದ ಅತ್ಯುತ್ತಮ ಬಾಲ ಕಲಾವಿದ ಪ್ರಶಸ್ತಿ ವಿಜೇತ ಮಾಸ್ಟರ್ ಅತೀಶ್ ಎಸ್. ಶೆಟ್ಟಿ ಅತ್ಯುತ್ತಮ ಸಿನಿಮಾ ಕುರಿತ ಪುಸ್ತಕ ವಿಭಾಗದಲ್ಲಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಡಾ. ಪ್ರದೀಪ್ ಕೆಂಚನೂರು, ಹಾಗೂ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಅತ್ಯುತ್ತಮ ತುಳು ಚಿತ್ರ ಪ್ರಶಸ್ತಿಗೆ ಭಾಜನವಾದ ‘ಇಂಬು’ ಚಿತ್ರದ ನಿರ್ದೇಶಕ ಶಿವಧ್ವಜ್ ಶೆಟ್ಟಿ ಮತ್ತು ನಿರ್ಮಾಪಕ ಪ್ರಶಾಂತ್ ರೈ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗೌರವಿಸಲ್ಪಟ್ಟ ಗಣ್ಯರು ತಮ್ಮ ಸಂತಸವನ್ನು ಹಂಚಿಕೊಂಡು. ಈ ಗೌರವಕ್ಕಾಗಿ ರೋಹನ್ ರೋಹನ್ ಕಾರ್ಪೊರೇಶನ್ ಗೆ ಕೃತಜ್ಞತೆ ಸಲ್ಲಿಸಿದರು. ತಮ್ಮ ಕಲಾ ಪಯಣದಲ್ಲಿ ಎದುರಿಸಿದ ಅನುಭವಗಳು, ಅದರ ಹಿಂದಿನ ಶ್ರಮ, ಬದ್ಧತೆ ಮತ್ತು ನಿರಂತರ ಪ್ರಯತ್ನಗಳ ಕುರಿತು ಅವರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಡಿಯೋನ್ ಮೊಂತೇರೊ. ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ಈ ಎಲ್ಲ ಪ್ರತಿಭೆಗಳಿಗೆ ಅಭಿನಂದನೆ ಸಲ್ಲಿಸಿ, ಅವರ ಯಶಸ್ಸು ಇಡೀ ಕರಾವಳಿ ಭಾಗಕ್ಕೆ ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು. ಇಂತಹ ಸಾಧಕರನ್ನು ಗುರುತಿಸಿ ಗೌರವಿಸುವುದು
ರೋಹನ್ ಕಾರ್ಪೊರೇಶನ್ ಗೆ ಸಂತಸದ ಸಂಗತಿಯಾಗಿದ್ದು, ಅವರ ಸಾಧನೆಗಳು ಮುಂದಿನ ಪೀಳಿಗೆಯ ಕಲಾವಿದರು, ಚಲನಚಿತ್ರ ನಿರ್ಮಾಪಕರು ಹಾಗೂ ಕಥೆಗಾರರಿಗೆ ಸೂರ್ತಿಯಾಗಲಿ ಎಂದು ಹಾರೈಸಿದರು.

ಕಾರ್ಯಕ್ರಮವನ್ನು ಲವಿಟಾ ಡಿಸೋಜಾ ಅವರು ನಿರೂಪಿಸಿದರು. ಸನ್ಮಾನ ಕಾರ್ಯಕ್ರಮದ ಬಳಿಕ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮವು ಯಶಸ್ವಿಯಾಗಿ ಸಮಾರೋಪಗೊಂಡಿತು


Spread the love
Subscribe
Notify of

0 Comments