ಮಂಗಳೂರು: ಖೋಟಾನೋಟು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Spread the love

ಮಂಗಳೂರು: ಖೋಟಾನೋಟು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: ಖೋಟಾನೋಟು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೂರ್ವ ಠಾಣಾ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಬಿಸಿರೋಡ್ ಸಮೀಪದ ತಲಪಾಡಿ ಜೋಡು ಮಾರ್ಗ ನಿವಾಸಿ ನಿಜಾಮ್ (33) ಬಂಧಿತ ಆರೋಪಿ.

ಈತನ ಮೇಲೆ 2023 ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಠಾಣಾ ಅ.ಕ್ರ 01/2023 ಕಲಂ 489 (ಬಿ) ಮತ್ತು (ಸಿ) ಜೊತೆಗೆ 34 ಭಾ.ದಂ.ಸಂ. ರಂತೆ ಪ್ರಕರಣ ದಾಖಲಾಗಿದ್ದು, ನ್ಯಾಯಲಯದಲ್ಲಿ ವಿಚಾರಣೆಯ ಹಂತದಲ್ಲಿದೆ. ಈ ಮಧ್ಯೆ ಆರೋಪಿಯು ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದ ಬಳಿಕ, ಪ್ರಕರಣದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಎಂದು ತಿಳಿದು ಬಂದಿದೆ.

ನ್ಯಾಯಾಲಯವು ಈತನ ಮೇಲೆ 8 ಬಾರಿ ಬಂಧನ ವಾರಂಟ್ ಹೊರಡಿಸಿದ್ದರೂ ತಲೆಮರೆಸಿಕೊಂಡಿದ್ದ ಈತನನ್ನು, ಮಂಗಳೂರು ಪೂರ್ವ ಪೊಲೀಸ್ ಠಾಣಾ ಅಪರಾಧ ವಿಭಾಗದ ಸಿಬ್ಬಂದಿ ಹಾಗೂ ವಾರಂಟ್ ಜಾರಿ ಸಿಬ್ಬಂದಿಗಳು ಆ. 25 ಸೋಮವಾರ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಬಳಿಯ ವಲಾಲು ಎಂಬಲ್ಲಿ ವಶಕ್ಕೆ ಪಡೆದಿದ್ದಾರೆ. ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಕಲಂ: 269 BNS-2023 ಪ್ರಕಾರ ಕ್ರಮ ಕೈಗೊಂಡು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.


Spread the love
Subscribe
Notify of

0 Comments
Inline Feedbacks
View all comments