Spread the love
ಮಂಗಳೂರು: ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ
ಮಂಗಳೂರು: ಭಾರತೀಯ ಹವಾಮಾನ ಇಲಾಖೆ, ತಿರುವನಂತಪುರಂ ಅವರು ನೀಡಿದ ಹವಾಮಾನ ಮುನ್ಸೂಚನೆಯಂತೆ ಜುಲೈ 23 ರಿಂದ 26 ರವರೆಗೆ ಅರಬ್ಬಿ ಸಮುದ್ರದಲ್ಲಿ ಮಳೆ ಮತ್ತು ಭಾರೀ ಗಾಳಿ ಬೀಸುವುದರಿಂದ ಪ್ರಕ್ಷುಬ್ದವಾಗಿರುತ್ತದೆ. ಆದ್ದರಿಂದ ಅನಾಹುತವನ್ನು ತಡೆಯುವ ಸಲುವಾಗಿ ನಾಡದೋಣಿ ಮೀನುಗಾರರು ಸೇರಿದಂತೆ ಯಾರೂ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಈ ಮೂಲಕ ಎಲ್ಲಾ ಮೀನುಗಾರರಿಗೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಮೀನುಗಾರಿಕಾ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Spread the love