ಮಟ್ಕಾ ಲಾಟರಿ ಕಟ್ಟುನಿಟ್ಟಿನ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಸೂಚನೆ

Spread the love

ಮಟ್ಕಾ ಲಾಟರಿ ಕಟ್ಟುನಿಟ್ಟಿನ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಸೂಚನೆ

ಮಂಗಳೂರು: ಜಿಲ್ಲೆಯಲ್ಲಿ ಮಟ್ಕಾ ಹಾಗೂ ಲಾಟರಿ ಹಾವಳಿಯನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅನಧಿಕೃತ ಲಾಟರಿ ಹಾವಳಿಯ ನಿಯಂತ್ರಣದ ಸಂಬಂಧ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಲಾಟರಿ ಮತ್ತು ಮಟ್ಕಾಕ್ಕೆ ಸಂಪೂರ್ಣ ನಿಷೇಧವಿದ್ದು, ಈ ನಿಟ್ಟಿನಲ್ಲಿ ಆಗ್ಗಿಂದಾಗೆ ತಪಾಸಣೆ ನಡೆಸುವಂತೆ ಅವರು ತಿಳಿಸಿದರು. ಸಣ್ಣ ಉಳಿತಾಯ ಇಲಾಖೆ ಸಹಾಯಕ ನಿರ್ದೇಶಕ ಪ್ರಸನ್ನ ಅವರು ಮಾತನಾಡಿ, ಜಿಲ್ಲೆಯಲ್ಲಿ 2025ರ ಏಪ್ರಿಲ್ನಿಂದ ಜೂನ್ವರೆಗೆ ಒಟ್ಟು 23 ಮಟ್ಕಾ ಪ್ರಕರಣಗಳನ್ನು ಪತ್ತೆಹಚ್ಚಲಾಗಿದ್ದು, 25 ಆರೋಪಿಗಳ ಮೇಲೆ ಪೊಲೀಸ್ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್.ಕೆ, ಉಪ ಪೊಲೀಸ್ ಆಯುಕ್ತ ಮಿಥುನ್ ಹೆಚ್.ಎನ್, ವಾಣಿಜ್ಯ ತೆರಿಗೆ ಅಧಿಕಾರಿ ದಿನೇಶ್ ಮತ್ತಿತರರು ಉಪಸ್ಥಿತರಿದ್ದರು.


Spread the love
Subscribe
Notify of

0 Comments
Inline Feedbacks
View all comments