ಮಾದಕ ವಸ್ತು ಸೇವನೆ ಹಾಗೂ ಮಾರಾಟ ಪ್ರಕರಣದಲ್ಲಿ ಮೂವರಿಗೆ ಜೈಲು ಶಿಕ್ಷೆ
ಬೆಳ್ತಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮಾದಕವಸ್ತು ಸೇವನೆ ಮತ್ತು ಮಾರಾಟ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.
ಅ.ಕ್ರ.120/2023ರಂತೆ NDPS ಕಾಯ್ದೆಯ ಕಲಂ 27(B) ಮತ್ತು 20(B)(ii)(A) ಅಡಿಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಉಪ್ಪಿನಂಗಡಿ ಠಾಣೆಯಲ್ಲಿ ಉಪನಿರೀಕ್ಷಕರಾಗಿದ್ದ ರಾಜೇಶ್ ಅವರು ತನಿಖೆ ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ಆರೋಪಿಗಳಾದ A1 ಸಲೀಂ ಹುಸೇನ್, A2 ಶಹಜ್ ಅಹಮದ್ ಮತ್ತು A3 ಮಹಮದ್ ಶಾಫಿ ವಿರುದ್ದ ದೋಷಾರೋಪಣಾ ಪಟ್ಟಿಯನ್ನು ಮಾನ್ಯ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಮಾನ್ಯ ಬೆಳ್ತಂಗಡಿ ಪಿ.ಎಸ್.ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ವಿಚಾರಣೆ ನಡೆಸಿ, ಆರೋಪಿಗಳ ಮೇಲಿದ್ದ ಆರೋಪಗಳು ಸಾಬೀತಾಗಿರುವ ಹಿನ್ನೆಲೆಯಲ್ಲಿ ಕೆಳಗಿನಂತೆ ಶಿಕ್ಷೆ ವಿಧಿಸಿದೆ:
ಕಲಂ 27(B) ಅಡಿಯಲ್ಲಿ, ₹10,000 ದಂಡ, ಒಂದು ವರ್ಷದ ಸಾದಾ ಕಾರಾಗೃಹ ಶಿಕ್ಷೆ, ಕಲಂ 20(B)(ii)(A) ಅಡಿಯಲ್ಲಿ: ₹10,000 ದಂಡ, ಒಂದು ವರ್ಷದ ಸಾದಾ ಕಾರಾಗೃಹ ಶಿಕ್ಷೆ
ಸರ್ಕಾರದ ಪರವಾಗಿ ಸಹಾಯಕ ಸಾರ್ವಜನಿಕ ಅಭಿಯೋಜಕರಾದ ದಿವ್ಯರಾಜ ಹೆಗ್ಡೆ ವಾದ ಮಂಡಿಸಿದ್ದರು.













