ಮುಖ್ಯಮಂತ್ರಿಯಾಗಿ ಬಿಎಸ್ ವೈ ಪ್ರಮಾಣವಚನ; ಉಡುಪಿ ಜಿಲ್ಲಾ ಬಿಜೆಪಿಯಿಂದ ಸಂಭ್ರಮಾಚರಣೆ
ಉಡುಪಿ: ಕರ್ನಾಟಕದ ಮುಖ್ಯಮಂತ್ರಿಯಾಗಿ ಬಿ.ಎಸ್ ಯಡ್ಯೂರಪ್ಪ ಅವರು ಪ್ರಮಾಣ ವಚನ ಸ್ವೀಕರಿಸಿದ ಹಿನ್ನಲೆಯಲ್ಲಿ ಗುರುವಾರ ನಗರದ ಜಿಲ್ಲಾ ಬಿಜೆಪಿ ಕಚೇರಿ ಬಳಿ ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

ಉಡುಪಿ ಜಿಲ್ಲಾ ಬಿಜೆಪಿ ಪಕ್ಷದ ಕಚೇರಿ ಬಳಿ ಜಮಾಯಿಸಿದ್ದ ನೂರಾರು ಕಾರ್ಯಕರ್ತರು ಬಿಜೆಪಿ ಬಾವುಟ ಪ್ರದರ್ಶಿಸಿ ಪಕ್ಷದ ಪರ, ಯಡ್ಯೂರಪ್ಪ ಪರ ಘೋಷಣೆಗಳನ್ನು ಕೂಗುವುದರೊಂದಿಗೆ ಸಂಭ್ರಮಾಚರಣೆ ಮಾಡಿದರು. ಸಾರ್ವಜನಿಕರಿಗೆ ಸಿಹಿ ಹಂಚುವುದರೊಂದಿಗೆ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ ಬಾಬು, ನಗರ ಬಿಜೆಪಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಶ್ರೀಶ ನಾಯಕ್, ಬಿಜೆಪಿ ನಾಯಕರಾದ ಶ್ಯಾಮಲಾ ಕುಂದರ್, ರಾಘವೇಂದ್ರ ಕಿಣಿ, ಸಂದ್ಯಾ ರಮೇಶ್, ನಳಿನಿ ಪ್ರದೀಪ್ ರಾವ್, ಉಪೇಂದ್ರ ನಾಯಕ್, ಮಹೇಶ್ ಠಾಕೂರ್, ರಶ್ಮಿತಾ ಬಾಲಕೃಷ್ಣ ಹಾಗೂ ಇತರರು ಉಪಸ್ಥಿತರಿದ್ದರು.













