ಮೂಡಬಿದ್ರೆ: ಟಾಟಾ ಕಂಟೈನರ್ನಲ್ಲಿ ಅಕ್ರಮ ಜಾನುವಾರು ಸಾಗಾಟ – ಮೂವರು ಆರೋಪಿಗಳ ಬಂಧನ

Spread the love

ಮೂಡಬಿದ್ರೆ: ಟಾಟಾ ಕಂಟೈನರ್ನಲ್ಲಿ ಅಕ್ರಮ ಜಾನುವಾರು ಸಾಗಾಟ – ಮೂವರು ಆರೋಪಿಗಳ ಬಂಧನ

ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಮೂಡಬಿದ್ರೆ ಪೊಲೀಸರು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಪ್ರಮುಖ ಆರೋಪಿ ಮನ್ಸೂರ್ ಅದ್ಯಪಾಡಿ @ ಮೊಹಮ್ಮದ್ ಮನ್ಸೂರ್ ವಿರುದ್ಧ ಮಾತ್ರ ಈಗಾಗಲೇ 29ಕ್ಕೂ ಹೆಚ್ಚು ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದು, ಇದು 30ನೇ ಪ್ರಕರಣವಾಗಿದೆ.

ಅಕ್ಟೋಬರ್ 15, 2025ರಂದು ಸಂಜೆ 5 ಗಂಟೆಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ, ಮೂಡಬಿದ್ರೆ ತಾಲೂಕು ಹೊಸ್ಮಾರು – ನೆಲ್ಲಿಕಾರು ರಸ್ತೆಯಲ್ಲಿ ಟಾಟಾ ಎಸಿ ಕಂಟೈನರ್ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಪೊಲೀಸ್ರಿಗೆ ಲಭಿಸಿತು.

ತಕ್ಷಣ ನಡೆದ ದಾಳಿಯಲ್ಲಿ, ಆರೋಪಿಗಳಾದ ಮನ್ಸೂರ್ ಅದ್ಯಪಾಡಿ @ ಮೊಹಮ್ಮದ್ ಮನ್ಸೂರ್, ಮೊಹಮ್ಮದ್ ಅಶ್ವದ್, ಅಬ್ದುಲ್ ಮೊಹಮ್ಮದ್ ನಿಶಾಮ್ ಎಂಬ ಮೂವರನ್ನು ವಶಕ್ಕೆ ಪಡೆಯಲಾಗಿದೆ. ವಾಹನದಲ್ಲಿ ಒಟ್ಟು 3 ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದುದು ಪತ್ತೆಯಾಗಿದೆ.

ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 178/2025 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

1ನೇ ಆರೋಪಿ ಮನ್ಸೂರ್ ಅದ್ಯಪಾಡಿ @ ಮೊಹಮ್ಮದ್ ಮನ್ಸೂರ್ – ವಿವಿಧ ಠಾಣೆಗಳಲ್ಲಿ ದಾಖಲಾಗಿರುವ 29 ಪ್ರಕರಣಗಳ ನಂತರ, ಇದು 30ನೇ ಪ್ರಕರಣವಾಗಿದ್ದು, 2ನೇ ಆರೋಪಿ ಮೊಹಮ್ಮದ್ ಅಶ್ವದ್ – ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಗೋಹತ್ಯೆ ನಿಷೇಧ ಕಾಯ್ದೆ ಅಡಿಯಲ್ಲಿ 1 ಪ್ರಕರಣ ದಾಖಲಾಗಿದ್ದು, ಇದು 2ನೇ ಪ್ರಕರಣವಾಗಿದೆ ಹಾಗೂ 3ನೇ ಆರೋಪಿ ಅಬ್ದುಲ್ ಮೊಹಮ್ಮದ್ ನಿಶಾಮ್ – ಇವರ ವಿರುದ್ಧ ಇದು ಮೊದಲ ಪ್ರಕರಣವಾಗಿದೆ.

ಆರೋಪಿಗಳ ಮೇಲೆ ಸಂಘಟಿತ ಅಪರಾಧ ಪ್ರಕರಣ ದಾಖಲಿಸಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ವಿಚಾರಣೆಯ ನಂತರ ನ್ಯಾಯಾಲಯವು ನ್ಯಾಯಾಂಗ ಬಂಧನವನ್ನು ವಿಧಿಸಿದೆ.


Spread the love
Subscribe
Notify of

0 Comments
Inline Feedbacks
View all comments