ರೋಹನ್ ಕಾರ್ಪೊರೇಶನ್ ವತಿಯಿಂದ ಮಂಗಳೂರು ಮಹಾನಗರ ಪಾಲಿಕೆಯ ಪೌರ ಕಾರ್ಮಿಕರಿಗೆ ಸುರಕ್ಷತಾ ಪಾದರಕ್ಷೆಗಳ ವಿತರಣೆ

Spread the love

ರೋಹನ್ ಕಾರ್ಪೊರೇಶನ್ ವತಿಯಿಂದ ಮಂಗಳೂರು ಮಹಾನಗರ ಪಾಲಿಕೆಯ ಪೌರ ಕಾರ್ಮಿಕರಿಗೆ ಸುರಕ್ಷತಾ ಪಾದರಕ್ಷೆಗಳ ವಿತರಣೆ

ಮಂಗಳೂರು:  ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್  ಕಂಪನಿ ರೋಹನ್ ಕಾರ್ಪೊರೇಶನ್ ಪೌರ  ಕಾರ್ಮಿಕರ ಆರೋಗ್ಯ ಮತ್ತು ಸುರಕ್ಷತೆಯನ್ನು ಕಾಳಜಿ ವಹಿಸುವ ಉದ್ದೇಶದಿಂದ, ಸೆಪ್ಟೆಂಬರ್ 29 ರಂದು ಮಂಗಳೂರು ಮಹಾನಗರ ಪಾಲಿಕೆಗೆ 100 ಜೋಡಿ ಸುರಕ್ಷತಾ ಪಾದರಕ್ಷೆಗಳನ್ನು ವಿತರಣೆ ಮಾಡುವ ಮೂಲಕ  ಸಾಮಾಜಿಕ ಕಾರ್ಯವನ್ನು ಹಮ್ಮಿಕೊಂಡಿತು.

ಈ ಕಾರ್ಯಕ್ರಮವು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾದ  ಶ್ರೀರವಿಚಂದ್ರ ನಾಯಕ್ ಉಪಸ್ಥಿತರಿದ್ದರು. ರೋಹನ್ ಕಾರ್ಪೊರೇಶನ್ ಮಾರ್ಕೆಟಿಂಗ್ ಮ್ಯಾನೇಜರ್ ಮಾಕ್ಷಿಮ್ ಲೋಬೊ  ಕಾರ್ಮಿಕರಿಗೆ ಪಾದರಕ್ಷೆಗಳನ್ನು ಹಸ್ತಾಂತರಿಸಿದರು.

“ಪೌರ  ಕಾರ್ಮಿಕರು ನಮ್ಮ ಸಮಾಜದ ಬೆನ್ನೆಲುಬು. ಅವರ ಶ್ರಮದಿಂದಲೇ ನಗರ ಸ್ವಚ್ಛವಾಗಿರುತ್ತದೆ. ಅವರ ಸುರಕ್ಷತೆಗಾಗಿ ನಾವು ಕೈಗೊಂಡಿರುವ ಈ ಉಪಕ್ರಮ ನಮ್ಮ ಸಾಮಾಜಿಕ ಜವಾಬ್ದಾರಿಯ ಭಾಗವಾಗಿದೆ” ಎಂದು ರೋಹನ್ ಕಾರ್ಪೊರೇಶನ್ ಮಾರ್ಕೆಟಿಂಗ್ ಮ್ಯಾನೇಜರ್ ಮಾಕ್ಷಿಮ್  ಲೋಬೊ  ಹೇಳಿದರು.

ಮಹಾ ನಗರ ಪಾಲಿಕೆ ಆಯುಕ್ತರು ಈ ಸಂದರ್ಭದಲ್ಲಿ, ಪೌರ  ಕಾರ್ಮಿಕರ ಸುರಕ್ಷತೆಯ ಕಡೆ ಗಮನ ಹರಿಸಿರುವ ರೋಹನ್ ಕಾರ್ಪೊರೇಶನ್ ನ ಸಮಾಜಮುಖಿ ಕಾರ್ಯವನ್ನು ಮೆಚ್ಚಿ, ಮುಂದೆಯೂ ಇಂತಹ ಸಮಾಜಮುಖಿ ಕಾರ್ಯಗಳು ನಡೆಯಲಿ ಎಂದು ಹಾರೈಸಿದರು.


Spread the love
Subscribe
Notify of

0 Comments
Inline Feedbacks
View all comments