Spread the love
ವಿಟ್ಲ | ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ ಆರೋಪ : ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಿರುದ್ಧ ಪ್ರಕರಣ ದಾಖಲು
ವಿಟ್ಲ: ವ್ಯಕ್ತಿಯೊರ್ವ ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾದ ಘಟನೆ ಇಡ್ಕಿದು ಗ್ರಾಮದ ಕೊಪ್ಪ ಎಂಬಲ್ಲಿ ನಡೆದಿದೆ.
ಆರೋಪಿಯನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ಎಂದು ಗುರುತಿಸಲಾಗಿದೆ.
ಮಹಿಳೆ ತನ್ನ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ತನ್ನ ಮನೆಗೆ ಬರುವ ದಾರಿಯಲ್ಲಿ ಯಾರೋ ಕೆಲಸ ಮಾಡುವ ಶಬ್ದ ಕೇಳಿದ ಹಿನ್ನಲೆ ಸ್ಥಳಕ್ಕೆ ತೆರಳಿ ವಿಡಿಯೋ ಮಾಡಿದ್ದು, ಇದನ್ನು ನೋಡಿದ ಪದ್ಮನಾಭ ಗುಪ್ತಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಕುರಿತು ವಿಟ್ಲ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ BNS 2023 u/s 79 ರಂತೆ ಪ್ರಕರಣ ದಾಖಲಾಗಿದೆ.
Spread the love