ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿ ಬಂಧನ

Spread the love

ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿ ಬಂಧನ

ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ತಮಿಳುನಾಡು ರಾಜ್ಯದ ವೆಲ್ಲೂರು ನಿವಾಸಿ ಶಶಿಕುಮಾರ್ (38) ಎಂದು ಗುರುತಿಸಲಾಗಿದೆ.
ದಿನಾಂಕ 29-08-2025 ರಂದು ರಾತ್ರಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾನಕ್ಕೆ ಅನಾಮಿಕ ವ್ಯಕ್ತಿ ಫೋನ್ ಕರೆ ಮಾಡಿ ಟರ್ಮಿನಲ್ ಬಿಲ್ಡಿಂಗ್ ನ್ನು ಖಾಲಿ ಮಾಡಬೇಕು ಇಲ್ಲವಾದರೆ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿರುತ್ತಾನೆ. ಈ ಬಗ್ಗೆ ಡ್ಯೂಟಿ ಟರ್ಮಿನಲ್ ಮ್ಯಾನೇಜರ್, ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಮಂಗಳೂರು ರವರು ಬಜಪೆ ಪೊಲೀಸ್ ಠಾಣೆಗೆ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಬೆದರಿಕೆ ಕರೆ ಮಾಡಿದ ಆರೋಪಿಯ ಶಶಿಕುಮಾರ್ ಎಂಬಾತನನ್ನು ತಮಿಳುನಾಡು ರಾಜ್ಯ ವೆಲ್ಲೂರ್ ನಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆಪಾಧಿತನು ದೇಶದ ಎಲ್ಲಾ ವಿಮಾನ ನಿಲ್ದಾನಗಳ ಮೊಬೈಲ್ ನಂಬ್ರವನ್ನು ಸಾಮಾಜಿಕ ಜಾಲತನದಲ್ಲಿ ಸರ್ಚ್ ಮಾಡಿ ಕರೆ ಮಾಡಿ ಬೆದರಿಕೆ ಹಾಕಿದ್ದು, ಅದೇ ತರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾನಕ್ಕೂ ಸಹ ಫೋನ್ ಮಾಡಿ ಟರ್ಮಿನಲ್ ಬಿಲ್ಡಿಂಗ್ ನ್ನು ಖಾಲಿ ಮಾಡಲು ತಿಳಿಸಿ ಖಾಲಿ ಮಾಡದೆ ಹೋದರೆ ಟರ್ಮಿನಲ್ ಬಿಲ್ಡಿಂಗ್ ನ್ನು ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ತಿಳಿಸಿರುತ್ತಾನೆ.

ಸದ್ರಿ ಆಪಾಧಿತನನ್ನು ದಸ್ತಗಿರಿ ಮಾಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುತ್ತಾನೆ.


Spread the love
Subscribe
Notify of

0 Comments
Inline Feedbacks
View all comments