ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರು ಡ್ರಗ್ ಪೆಡ್ಲರ್ಸ್ ಬಂಧನ

Spread the love

ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರು ಡ್ರಗ್ ಪೆಡ್ಲರ್ಸ್ ಬಂಧನ

ಉಳ್ಳಾಲ: ಕೋಟೆಕಾರು ಗ್ರಾಮದ ಬಗಂಬಿಲ ಗೌಂಡ್ ಮತ್ತು ಪೆರ್ಮನ್ನೂರು ಗ್ರಾಮದ ಗಂಡಿ ಎಂಬಲ್ಲಿ ಡ್ರಗ್ ಪೆಡ್ಡಿಂಗ್‌ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಭಾನುವಾರ(ನ. 9) ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳಿಂದ 59,300. ರೂ. ಬೆಲೆಬಾಳುವ 1.511 ಕೆಜಿ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ 2 ತೂಕ ಮಾಪಕ, 2 ಮೊಬೈಲ್, 1 ಸ್ಕೂಟರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಖಾಸಗಿ ಆಯುರ್ವೇದ ಕಾಲೇಜಿನಲ್ಲಿ ಬಿಎಎಂಎಸ್ ವಿದ್ಯಾರ್ಥಿ ಆಗಿರುವ ಮಹಾರಾಷ್ಟ್ರದ ಧುಲೆ ನಿವಾಸಿ ಮೊಹಮ್ಮದ್ ನಿಗಾರೀಸ್ (22) ವಿಲಾಸಿ ಜೀವನಕ್ಕಾಗಿ ತನ್ನ ಊರಿನಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದನು.

ಇನ್ನೊಂದು ಪ್ರಕರಣದಲ್ಲಿ ನಾಟೆಕಲ್ ಉರುಮಣೆ ನಿವಾಸಿ ಅಬ್ದುಲ್ ಶಕೀಬ್ ಯಾನೆ ಶಾಕಿ (22) ಮತ್ತು ಪೆರ್ಮನ್ನೂರು ಗಂಡಿ ನಿವಾಸಿ ಸಬೀರ್ ಅಹಮ್ಮದ್ (24) ಎಂಬವರನ್ನು ಬಂಧಿಸಲಾಗಿದೆ. ಅಬ್ದುಲ್ ಶಕೀಬ್ ಹಾಗೂ ಸಬೀರ್ ಅಹಮ್ಮದ್, ಡ್ರೈವರ್ ಮತ್ತು ಹೈಂಟರ್ ಆಗಿದ್ದು, ಅವರು ಸ್ನೇಹಿತರಾಗಿದ್ದರು. ಶಕೀಬನು ಬಿ.ಸಿ.ರೋಡ್‌ನ ಫ್ಯಾಬೀನ್ ಎಂಬಾತನಿಂದ ಗಾಂಜಾ ಪಡೆದುಕೊಂಡು ಮಾರಾಟ ಮಾಡುತ್ತಿರುವಾಗ ಗಂಡಿ ಪ್ರದೇಶದಿಂದ ಬಂಧಿಸಿದ್ದಾರೆ. 420 ಗ್ರಾಂ ಗಾಂಜಾ, 6,000 ರೂ. ನಗದು ವಶಪಡಿಸಿಕೊಂಡಿದ್ದಾರೆ. ಉಳ್ಳಾಲ ಠಾಣಾಧಿಕಾರಿ ವಿರೂಪಾಕ್ಷ ಸ್ವಾಮಿ ನಿರ್ದೇಶನಂತೆ ಎಸ್‌ಐ ಸಿದ್ದಪ್ಪ ನರನೂರ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿತ್ತು.


Spread the love
Subscribe
Notify of

0 Comments
Inline Feedbacks
View all comments