Spread the love
ಸಂದೀಪ್ ವಾಗ್ಲೆಗೆ ಪ.ಗೋ.ಪ್ರಶಸ್ತಿ
ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ 2016ನೇ ಸಾಲಿನ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಗೆ ‘ಕನ್ನಡ ಪ್ರಭ’ ಪತ್ರಿಕೆಯ ಹಿರಿಯ ವರದಿಗಾರ ಸಂದೀಪ್ ವಾಗ್ಲೆ ಆಯ್ಕೆಯಾಗಿದ್ದಾರೆ.

2016ರ ಜುಲೈ 26 ರಂದು ಕನ್ನಡ ಪ್ರಭ ಪತ್ರಿಕೆಯಲ್ಲಿ ಪ್ರಕಟವಾದ “ನಾಡಿಗೆ ಬಂದು ಸೊರಗಿದ ಕೊರಗರು’’ ಅವರ ಈ ವರದಿಗೆ ಪ್ರಶಸ್ತಿ ಲಭಿಸಿದೆ.
ಪ್ರಶಸ್ತಿಯು ರೂ.10,001/ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯಕ್ ಇಂದಾಜೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Spread the love














2016ನೇ ಸಾಲಿನ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿ ವಿಜೇತ ಸಂದೀಪ್ ವಾಗ್ಲೆಯವರಿಗೆ ಅಭಿನಂದನೆಗಳು