Spread the love
ಸಾಸ್ತಾನ ಟೋಲ್ ಗೇಟ್ ಕಂಬಕ್ಕೆ ಬಸ್ ಢಿಕ್ಕಿ: 12 ಮಂದಿ ಪ್ರಯಾಣಿಕರಿಗೆ ಗಾಯ
ಕೋಟ: ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಟೋಲ್ ಗೇಟ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ 12 ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಆ.24ರಂದು ಮುಂಜಾನೆ 4:45ರ ಸುಮಾರಿಗೆ ಸಾಸ್ತಾನ ಟೋಲ್ ಗೇಟ್ ಬಳಿ ಸಂಭವಿಸಿದೆ.
ಇಳಕಲ್ ನಿಂದ ಮಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಟೋಲ್ ಗೇಟ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಈ ವೇಳೆ ಬಸ್ಸಿನಲ್ಲಿದ್ದ 36 ಪ್ರಯಾಣಿಕರ ಪೈಕಿ 12 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಓರ್ವ ಮಹಿಳೆಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಗಾಯಗೊಂಡವರನ್ನು ತಕ್ಷಣ ಕೋಟ ಜೀವನ್ ಮಿತ್ರ ಆಂಬುಲೆನ್ಸ್ ನಾಗರಾಜ್ ಪುತ್ರನ್ ಹಾಗೂ ಟೋಲ್ ಆಂಬುಲೆನ್ಸ್ ನಲ್ಲಿ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಕೋಟ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
Spread the love