Spread the love
ಸುಳ್ಯ: ಸಂಪಾಜೆ ಗೇಟಿನ ಬಳಿ ರಸ್ತೆ ಅಪಘಾತ; ರಿಕ್ಷಾ ಚಾಲಕ ಸ್ಥಳದಲ್ಲೇ ಮೃತ್ಯು
ಸುಳ್ಯ: ಕಾರೊಂದು ರಿಕ್ಷಾಕ್ಕೆ ಹಿಂಬದಿಯಿಂದ ಢಿಕ್ಕಿ ಹೊಡೆದು ಪರಾರಿಯಾಗಿದ್ದು, ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಎದುರಿನಿಂದ ಬಂದ ಲಾರಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಡಗು ಸಂಪಾಜೆ ಗೇಟಿನ ಬಳಿ ಸಂಭವಿಸಿದೆ.
ಮೃತ ಚಾಲಕನನ್ನು ಸುಂದರ ಚಿಟ್ಟಿಕ್ಕಾನ ( 56) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇನ್ನೋರ್ವ ಪ್ರಯಾಣಿಕನಿಗೂ ಗಾಯಗಳಾಗಿದೆ ಎಂದು ತಿಳಿದುಬಂದಿದೆ.
ರಿಕ್ಷಾ ಸಂಪಾಜೆ ಗೇಟಿನಿಂದ ಚೆಡಾವು ಕಡೆ ತೆರಳುತ್ತಿದ್ದು ಕೊಡಗು ಸಂಪಾಜೆ ಪೆಟ್ರೋಲ್ ಪಂಪ್ ಬಳಿಯ ತಿರುವಿನಲ್ಲಿ ಹಿಂದಿನಿಂದ ಬಂದ ಕಾರು ಢಿಕ್ಕಿ ಹೊಡೆದು ಪರಾರಿಯಾಗಿದ್ದು ಈ ವೇಳೆ ಎದುರಿನಿಂದ ಬರುತ್ತಿದ್ದ ಲಾರಿ ಅಡಿಗೆ ರಿಕ್ಷಾ ಚಾಲಕ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
Spread the love













