ಸೆ. 21: ದಕ ಜಿಲ್ಲೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರವಾಸ
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೆಪ್ಟೆಂಬರ್ 21 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ.
ಅಂದು ಬೆಳಿಗ್ಗೆ 6:55 – ಮಂಗಳೂರು ವಿಮಾನ ನಿಲ್ದಾಣ ಆಗಮನ, 10- ನಗರದ ಮಂಗಳಾ ಸ್ಟೇಡಿಯಂನಲ್ಲಿ ಮಂಗಳೂರು ತಾಲೂಕು ಬಿಲ್ಲವ ಸಂಘ ವತಿಯಿಂದ ಮಂಗಳೂರು ದಸರಾ ಕ್ರೀಡೋತ್ಸವ ಕಾರ್ಯಕ್ರಮ, 11- ದಿ ಓಶಿಯನ್ ಪರ್ಲ್ ಹೋಟೆಲ್‍ನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾವಳಿ ಆಯೋಜನೆ ಬಗ್ಗೆ ಪೂರ್ವಭಾವಿ ಸಭೆ, 12:30 – ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನೂತನ ಕ್ಯಾಥ್‍ಲ್ಯಾಬ್ ಹಾಗೂ ನ್ಯೂ ಮೆಡಿಸಿನ್ ಬ್ಲಾಕ್‍ನ 4ನೇ ಮಹಡಿಯ ಡಯಾಲಿಸಿಸ್ ವಿಭಾಗದ ನೂತನ ಕಟ್ಟಡ ಉದ್ಘಾಟನೆ ಸಮಾರಂಭ, 2:30- ಕಂಕನಾಡಿ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್‍ನಲ್ಲಿ ವೆನ್‍ಲಾಕ್, ಲೇಡಿಗೋಷನ್ ಮತ್ತು ಕೆಎಂಸಿ ಆಸ್ಪತ್ರೆಗಳ ಹಳೆ ವಿದ್ಯಾರ್ಥಿಗಳ ಸಂಘ ಇದರ ಉದ್ಘಾಟನೆ ಸಮಾರಂಭ ಹಾಗೂ ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ ಮತ್ತು ಲೇಡಿಗೋಷನ್ ಆಸ್ಪತ್ರೆಗಳ 175ನೇ ಸಂಭ್ರಮಾಚರಣೆಯ ಚಾಲನಾ ಕಾರ್ಯಕ್ರಮ, ಸಂಜೆ 4:30- ವಾರ್ತಾಭಾರತಿ ದಿನಪತ್ರಿಕೆ ಕೇಂದ್ರ ಕಚೇರಿಗೆ ಭೇಟಿ, 5:30- ಸಕ್ರ್ಯೂಟ್ ಹೌಸ್‍ನಲ್ಲಿ ಮಂಗಳೂರು ದಸರಾ ಬಗ್ಗೆ ಸಂಬಂಧಪಟ್ಟಂತೆ ಅಧಿಕಾರಿಗಳೊಂದಿಗೆ ಸಭೆ, ರಾತ್ರಿ 10:45- ಸಚಿವರು ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ.