Spread the love
ಸೆ. 21 ವೆನ್‍ಲಾಕ್, ಲೇಡಿಗೋಷನ್ 175ನೇ ವರ್ಷದ ಸಂಭ್ರಮಾಚರಣೆ
ಮಂಗಳೂರು: ವೆನ್‍ಲಾಕ್, ಲೇಡಿಗೋಷನ್ ಮತ್ತು ಕೆ.ಎಂ.ಸಿ. ಆಸ್ಪತ್ರೆಗಳ ಹಳೆ ವಿದ್ಯಾರ್ಥಿ ಸಂಘ ಇದರ ಉದ್ಘಾಟನಾ ಸಮಾರಂಭ ಹಾಗೂ ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ ಮತ್ತು ಲೇಡಿಗೋಷನ್ ಆಸ್ಪತ್ರೆಗಳ 175ನೇ ವರ್ಷದ ಸಂಭ್ರಮಾಚರಣೆಯ ಚಾಲನಾ ಕಾರ್ಯಕ್ರಮ
ಸೆಪ್ಟೆಂಬರ್ 21 ರಂದು ಮಧ್ಯಾಹ್ನ 2.30 ಗಂಟೆಗೆ ಕಂಕನಾಡಿ ಫಾದರ್ ಮುಲ್ಲರ್ ಕನ್ವೆಂಷನ್ ಸೆಂಟರ್‍ನಲ್ಲಿ ನಡೆಯಲಿದೆ.
ವಿಧಾನಸಭೆ ಸ್ಪೀಕರ್ ಯು. ಟಿ. ಖಾದರ್ ಫರೀದ್ ಘನ ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಲಿದ್ದಾರೆ. ಶಾಸಕ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.
Spread the love